Call Us Now
+91 94482 84602

ಪ್ರಬಂಧ ಸ್ಪರ್ಧೆಯ ಪೋಸ್ಟರ್ ಬಿಡುಗಡೆ ಸಮಾರಂಭ

ಉತ್ಥಾನ ಮಾಸಪತ್ರಿಕೆಯು ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯ ಪೋಸ್ಟರ್ ಬಿಡುಗಡೆ ಸಮಾರಂಭ ಬೆಂಗಳೂರಿನ ರಾಷ್ಟ್ರೋತ್ಥಾನ ಪರಿಷತ್ನಲ್ಲಿ ನಡೆಯಿತು. ವಿಶ್ವವಿದ್ಯಾಲಯದ ಕುಲಪತಿ ಡಾ|| ಕೆ.ಆರ್. ವೇಣುಗೋಪಾಲ್, ನೃಪತುಂಗ ವಿಶ್ವವಿದ್ಯಾಲಯದ ಕುಲಪತಿ ಡಾ|| ಶ್ರೀನಿವಾಸ ಬಳ್ಳಿ, ರಾಜೀವ್ಗಾಂಧಿ ವಿಶ್ವವಿದ್ಯಾಲಯದ ಕುಲಪತಿ ಡಾ|| ಜಯಕರ ಶೆಟ್ಟಿ, ಬೆಂಗಳೂರು ನಗರ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಪ್ರೊ. ನರಸಿಂಹಮೂರ್ತಿ, ಬೆಸ್ಟೀ ವಿಶ್ವವಿದ್ಯಾಲಯದ ಕುಲಪತಿ ಡಾ|| ರೂಪಾ ವಾಸುದೇವನ್, ಬಿ.ಎಂ.ಎಸ್. ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಪರೀಕ್ಷಾ ಕುಲಪತಿ ಡಾ|| ಮಂಜುನಾಥ ಭಟ್, ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ|| ರವಿಶಂಕರ್, ದಯಾನಂದ ಸಾಗರ್ ದಂತವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ|| ಹೇಮಂತ್ ಸೇರಿದಂತೆ ಶಿಕ್ಷಣ ತಜ್ಞರು, ಶೈಕ್ಷಣಿಕ ಸಂಸ್ಥೆಗಳ ಮುಖಂಡರು, ರಾಷ್ಟ್ರೋತ್ಥಾನ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ದಿನೇಶ್ ಹೆಗ್ಡೆ ಪಾಲ್ಗೊಂಡಿದ್ದರು