Call Us Now
+91 94482 84602
Email Us
info@rashtrotthana.org

ರಾಷ್ಟ್ರೋತ್ಥಾನ ಪರಿಷತ್ ಮೈಸೂರಿನಲ್ಲಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಪ್ರಾರಂಭಿಸಲಿದ್ದು, ಇಂದು ಶಾಲಾ ಕಟ್ಟಡದ ಭೂಮಿ ಪೂಜೆ ಹಾಗೂ ಸಭಾ ಕಾರ್ಯಕ್ರಮ ನಡೆಯಿತು. ರಾಮಕೃಷ್ಣಮಠದ ಪೂಜ್ಯ ಸ್ವಾಮಿ ಮುಕ್ತಿದಾನಂದ ಮಹಾರಾಜ್ ದಿವ್ಯ ಸಾನ್ನಿಧ್ಯ ವಹಿಸಿದರು. ಆರೆಸ್ಸೆಸ್ಸ್ ನ ಕ್ಷೇತ್ರಿಯ ಕಾರ್ಯವಾಹ ನಾ.ತಿಪ್ಪೇಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್, ಕೊಡಗು-ಮೈಸೂರು ಸಂಸದ ಪ್ರತಾಪ ಸಿಂಹ, ಮಾಜಿ ಸಚಿವರಾದ ಜಿ.ಟಿ. ದೇವೇಗೌಡ ಮುಂತಾದವರು ಉಪಸ್ಥಿತರಿದ್ದರು.