Call Us Now
+91 94482 84602

ಹೆಮ್ಮೆ ತಂದ ಸಾಧನಾ ಹೆಣ್ಣುಮಕ್ಕಳ ದ್ವಿತೀಯ ಪಿ.ಯು.ಸಿ. ಫಲಿತಾಂಶ

2021-22ನೇ ಸಾಲಿನ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಸಾಧನಾದ ಹೆಣ್ಣುಮಕ್ಕಳು 100% ಪ್ರಥಮಶ್ರೇಣಿ ಹಾಗೂ 98% ಡಿಸ್ಟಿಂಕ್ಷನ್‍ನಲ್ಲಿ ತೇರ್ಗಡೆಯಾಗುವುದರೊಂದಿಗೆ ಹೆಮ್ಮೆಪಡುವ ಸಾಧನೆ ಮಾಡಿದ್ದಾರೆ.
ಸಾಧನಾ, ಇದು ರಾಷ್ಟ್ರೋತ್ಥಾನ ಪರಿಷತ್ತಿನ ಅಪೂರ್ವ ಯೋಜನೆ. ಈ ಯೋಜನೆಯಲ್ಲಿ ಕರ್ನಾಟಕ ರಾಜ್ಯದಲ್ಲಿನ ಆರ್ಥಿಕವಾಗಿ ಹಿಂದುಳಿದ, ಗ್ರಾಮೀಣ ಪ್ರದೇಶದಲ್ಲಿರುವ, ವೈದ್ಯಕೀಯ ಶಿಕ್ಷಣ ಪಡೆಯುವ ಇಚ್ಛೆಯುಳ್ಳ ಪ್ರತಿಭಾವಂತ ಹೆಣ್ಣುಮಕ್ಕಳನ್ನು ಪ್ರವೇಶ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಿ, ಅವರಿಗೆ 2 ವರ್ಷಗಳ ಪಿ.ಯು. ಶಿಕ್ಷಣ, ವೈದ್ಯಕೀಯ ಪ್ರವೇಶ ಪರೀಕ್ಷೆಗೆ ತರಬೇತಿ (NEET, CET) ಹಾಗೂ ಹಾಸ್ಟೆಲ್ ವ್ಯವಸ್ಥೆ ಎಲ್ಲವನ್ನೂ ಉಚಿತವಾಗಿ ಒದಗಿಸಲಾಗುತ್ತದೆ.
ಈ ಸಾಲಿನ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಸಾಧನಾದ 70 ವಿದ್ಯಾರ್ಥಿನಿಯರು ಒಳ್ಳೆಯ ಸಾಧನೆ ಮಾಡಿದ್ದಾರೆ. ಗ್ರಾಮೀಣ ಭಾಗದ ಸರ್ಕಾರಿ ಶಾಲೆ, ಕನ್ನಡ ಮಾಧ್ಯಮ ಇನ್ನಿತರ ಶಾಲೆಗಳಿಂದ ಬಂದು, 2 ವರ್ಷ ಶಿಸ್ತುಬದ್ಧವಾದ ಅಧ್ಯಯನದಲ್ಲಿ ತೊಡಗಿಸಿಕೊಂಡು ಉತ್ತಮ ಅಂಕಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಅವರಿಗೆ ರಾಷ್ಟ್ರೋತ್ಥಾನ ಪರಿಷತ್ ಪರಿವಾರದ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳು.

https://rashtrotthana.org/
https://www.youtube.com/channel/UCccixFI_2_JydCPQWBCYpPQ
https://www.facebook.com/rashtrotthanaparishat
https://www.instagram.com/rashtrotthanaparishat/
https://twitter.com/Rashtrotthana_P

Rashtrotthana #RashtrotthanaParishat #RashtrotthanaParishatBengaluru #Saadhana #RashtrotthanaSaadhana #IIPUResult